ಕಲಬುರಗಿ: ಪರಿಸರ ಮಾಲಿನ್ಯ ತಡೆ ಹಾಗೂ ಇಂಧನ ಉಳಿತಾಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು..
ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.