ETV Bharat / state

ಬಿಸಿಲು ಲೆಕ್ಕಿಸದೇ ದುಡಿದ್ರೂ‌ ಕೂಲಿ ಹಣ ನೀಡ್ತಿಲ್ಲ: ಅಧಿಕಾರಿಗಳ ವಿರುದ್ಧ ಉದ್ಯೋಗ ಖಾತ್ರಿ ಕಾರ್ಮಿಕರ ಆರೋಪ - ಕಲಬುರಗಿ ಜಿಲ್ಲಾ ಪಂಚಾಯತಿ ಕಚೇರಿ

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯ ಕೂಲಿ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

daily-wage-worker-demand-for-wages-in-kalaburagi
ಬಿಸಿಲು ಲೆಕ್ಕಿಸದೆ ದುಡಿದ್ರೂ‌ ಕೂಲಿ ಹಣ ನೀಡ್ತಿಲ್ಲ: ಅಧಿಕಾರಿಗಳ ವಿರುದ್ಧ ಉದ್ಯೋಗ ಖಾತ್ರಿ ಕಾರ್ಮಿಕರ ಆರೋಪ
author img

By

Published : May 19, 2023, 8:56 PM IST

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಸಂಕಷ್ಟ ತಂದೊಡ್ಡಿದೆ. ಚುನಾವಣೆ ಹಿನ್ನೆಲೆ ಉದ್ಯೋಗ ಖಾತ್ರಿಯ ಕೂಲಿ ಕಾರ್ಮಿಕರಿಗೆ ಕಳೆದ ಒಂದೂವರೇ ತಿಂಗಳಿಂದ ಕೂಲಿ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಕೂಲಿ ಹಣ ಸಿಗದೇ ನಾನಾ ಸಮಸ್ಯೆ ಎದುರಿಸುತ್ತಿರೋ ಕಲಬುರಗಿ ಜಿಲ್ಲೆಯ ಕೂಲಿ ಕಾರ್ಮಿಕರು ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.

ದುಡಿಯುವ ಕೈಗಳಿಗೆ ಕೆಲಸ ನೀಡಲು ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದ ಉದ್ಯೋಗ ಖಾತ್ರಿ ಯೋಜನೆ ಹಲವು ಕಡೆಗಳಲ್ಲಿ ಸರಿಯಾಗಿ ಅನುಷ್ಠಾನ ಆಗದೆ ಕೂಲಿಕಾರಿಗೆ ಕೆಲಸ ಸಿಗದೆ ಪರದಾಡುವಂತಾಗಿದೆ. ಅಲ್ಲದೆ ಉದ್ಯೋಗ ಖಾತ್ರಿಯಲ್ಲಿನ ಭ್ರಷ್ಟಾಚಾರ ಕೂಡ ತಾಂಡವವಾಡ್ತಿದೆ. ಅಂದಹಾಗೆ ರಾಜ್ಯದಲ್ಲಿ ಜರುಗಿದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಕೂಲಿ ಕೆಲಸ ಮಾಡಿರುವ ಕೂಲಿಕಾರರಿಗೆ ಕಳೆದ ಒಂದೂವರೇ ತಿಂಗಳಿಂದ ಕೂಲಿ ಹಣ ಬೀಡುಗಡೆ ಮಾಡಿಲ್ಲ‌ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಕೂಲಿ ಹಣ ಸಿಗದೇ ಪರದಾಡ್ತಿರುವ ಸಾವಿರಾರು ಕೂಲಿ ಕಾರ್ಮಿಕರು ನಾನಾ ರೀತಿಯ ಆರ್ಥಿಕ ಸಮಸ್ಯೆ ಎದುರಿಸುವಂತಾಗಿದೆ. ಕೆಲಸ ಮಾಡಿ ಕೂಲಿ ಹಣ ಸಿಗದೆ ಕಷ್ಟ ಎದುರಿಸುತ್ತಿರುವ ನೂರಾರು ಕೂಲಿ ಕಾರ್ಮಿಕರು ಹಣ ಬಿಡುಗಡೆ ಮಾಡುವಂತೆ, ಕರ್ನಾಟಕ ಪ್ರಾಂತ್ಯ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘಟನೆ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಒಂದೂವರೇ ತಿಂಗಳ ಕೂಲಿ ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೂಲಿಕಾರರು ಆಗ್ರಹಿಸಿದ್ದಾರೆ. ಬಿರು ಬೇಸಿಗೆ ಹಿನ್ನೆಲೆ ದಿನಕ್ಕೆ ಒಂದು ಸಲ ಮಾತ್ರ NMMS ಮಾಡಬೇಕು. ಬಿಸಿಲಿರುವ ಕಾರಣ ಕೂಲಿ ಕೆಲಸ ಪ್ರಮಾಣ ಕಡಿಮೆ ಮಾಡಬೇಕು. ಕೆಲಸ ಮಾಡುವ ಸ್ಥಳದಲ್ಲಿ ನೆರಳು ಮತ್ತು ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಅಲ್ಲದೇ ಕೆಲಸ ಮಾಡುವ ಸಾಮಗ್ರಿಗಳ ಶುದ್ದಿಕರಣಕ್ಕಾಗಿ ವಾರಕ್ಕೊಂದು ಸಲ ಹಣ ನೀಡಬೇಕು. ಈ ಹಿಂದೆ ಕಡಿತಗೊಂಡ ಜಾಬ್ ಕಾರ್ಡ್​​​ಗಳನ್ನು ಪುನಃ ಹೊಸದಾಗಿ ಮಾಡಿಕೊಡಬೇಕು. ನಕಲಿ ಕೂಲಿಕಾರರ ಹೆಸರಿನಲ್ಲಿ ಭ್ರಷ್ಟಾಚಾರ ಮಾಡ್ತಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಮ ಪಂಚಾಯತ್ ಕೇಂದ್ರ ಸ್ಥಾನದಲ್ಲಿ ಇರದ ಅಭಿವೃದ್ಧಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಉದ್ಯೋಗ ಖಾತ್ರಿ ಕೂಲಿಕಾರರು ಇಲಾಖೆಯ ಅಧಿಕಾರಿಗಳಿಗೆ, ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ನೆರವಾಗಲಿ ಎಂದು ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೆ ತಂದಿದೆ. ಆದರೆ, ಸರಿಯಾಗಿ ಅನುಷ್ಠಾನ ಮಾಡಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕೂಲಿಕಾರರಿಗೆ ಸರಿಯಾಗಿ ಕೂಲಿ ಹಣ, ಕೆಲಸ ಸಿಗದೆ ಪರದಾಡುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಯಾಗಿ ಕಾರ್ಯನಿರ್ವಹಿಸ ಬೇಕು ಎಂದು ಕೂಲಿ ಕಾರ್ಮಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಮೈಗ್ರೇನ್‌ ಎಂದುಕೊಂಡಿದ್ದ ವ್ಯಕ್ತಿಯಲ್ಲಿ ಅಪರೂಪದ ನರಮಂಡಲದ ವಿಪ್ಪಲ್‌ ಕಾಯಿಲೆ ಪತ್ತೆ: ನಗರದ ವೈದ್ಯರಿಂದ ಯಶಸ್ವಿ ಚಿಕಿತ್ಸೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.