ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಡಾ. ಬಿ.ಆರ್ ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎನ್ನುವಂತಹ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಅಶಾಂತಿ ವಾತಾವರಣ ನಿರ್ಮಿಸಿರುವುದಕ್ಕೆ ದಲಿತ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಎದುರು ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಕೆ.ಎಸ್.ಮಣಿ, ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಹಾಗೂ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜೆ ಜಗದೀಶ ಅವರ ವಿರುದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಎ.ಬಿ.ಹೊಸಮನಿ ಅವರು ಇಲ್ಲಿನ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಸಾವರ್ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸಂವಿಧಾನ ದಿನ ಆಚರಣೆ ಸುತ್ತೋಲೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರು ಒಬ್ಬರೆ ಸಂವಿಧಾನ ಬರೆದಿಲ್ಲ ಎಂದು ನಮೂದಿಸುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ.
ಈ ಕಾರಣ ಸಾವರ್ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 167, 200, 205, 321, 504, 499 ಮತ್ತು 500 ಕಾಯ್ದೆ 1989 ಹಾಗೂ 1995 ಅನ್ವಯ ಕೇಸ್ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
ಇನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಡಾ. ಬಿ.ಆರ್ ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎನ್ನುವಂತಹ ಸುತ್ತೋಲೆಯನ್ನು ಹೊರಡಿಸಿ ರಾಜ್ಯದಲ್ಲಿ ಅಶಾಂತಿ ವಾತಾವರಣ ನಿರ್ಮಿಸಿರುವುದನ್ನು ಖಂಡಿಸಿ ನಿರ್ದೇಶಕ ಹಾಗೂ ಕಾರ್ಯದರ್ಶಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.