ಕಲಬುರಗಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರೈತ ಮತ್ತು ದಲಿತ ವಿರೋಧಿಯಾಗಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು. ಭೂಮಿಯಿಲ್ಲದ ರೈತರಿಗೆ 5 ಎಕರೆ ಭೂಮಿ ಕೊಡಬೇಕು. ದಲಿತರ ಮೇಲೆ ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಪ್ರಾಂತ ರೈತ ಸಂಘದ ಮಾರುತಿ ಮಾನ್ಪಡೆ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.