ETV Bharat / state

ಕೊರೊನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಚರ್ಚೆ

author img

By

Published : Jul 11, 2020, 3:57 PM IST

ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ಜಿಲ್ಲಾಧಿಕಾರಿ ಶರತ್ ಬಿ. ಕಲಬುರಗಿ ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು..

DC meeting
DC meeting

ಕಲಬುರಗಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಶರತ್ ಬಿ. ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕಳೆದ 15 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣ ಬರುತ್ತಿವೆ. ಜೊತೆಗೆ ಸಾವಿನ ಸಂಖ್ಯೆ ಸಹ ಹೆಚ್ಚುತ್ತಿದೆ. ಈ ಹಿನ್ನೆಲೆ ಮುಂದಿನ ದಿನದಲ್ಲಿ ಇನ್ನು ಹೆಚ್ಚಿನ ಗುಣಮಟ್ಟದ ವೈದ್ಯಕೀಯ ವ್ಯವಸ್ಥೆ, ಹಾಸಿಗೆ ಹೆಚ್ಚಳ ಸೇರಿ ಆಸ್ಪತ್ರೆಗಳ ಮೂಲ ಸೌಲಭ್ಯ ಹೆಚ್ಚಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರದಿಂದ ಮಾತ್ರ ಕೊರೊನಾ ತಡೆಯಲು ಸಾಧ್ಯವಿದ್ದು, ಜಿಲ್ಲೆಯ ಜನತೆ ಇದನ್ನು ತಪ್ಪದೆ ಪಾಲಿಸಬೇಕು. ಅನಗತ್ಯ ಓಡಾಟ ಹಾಗೂ ಗುಂಪಾಗಿ ಸೇರಬಾರದು. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಬೇಕು ಮತ್ತು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನೆಯಲ್ಲಿ ದೀರ್ಘ ಕಾಯಿಲೆಯಿಂದ ಬಳಲುತ್ತಿರುವವರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಇದ್ದಲ್ಲಿ ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರು ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಜನಸಂದಣಿಯಾದ್ರೆ ಅಂಗಡಿಗಳ ವಿರುದ್ಧ ಕ್ರಮ : ಅಂಗಡಿ ಮುಂಗಟ್ಟುಗಳ ಮುಂದೆ ಸಾರ್ವಜನಿಕರು ಗುಂಪಾಗಿ ಸೇರಿದ್ದಲ್ಲಿ ಅಥವಾ ಸಾಮಾಜಿಕ ಅಂತರ ಕಾಪಾಡಲು ಅಂಗಡಿಗಳು ವಿಫಲವಾದಲ್ಲಿ ಅಂತಹ ಅಂಗಡಿ ಮುಂಗಟ್ಟುಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.

ಗೃಹ ಬಂಧನ ಉಲ್ಲಂಘಿಸುವಂತಿಲ್ಲ : ಅನ್ಯರಾಜ್ಯದಿಂದ ಬಂದವರು ಅಥವಾ ಕೊರೊನಾ ಸೋಂಕಿತರ ಸಂಪರ್ಕಕ್ಕೆ ಒಳಗಾದವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಕಡ್ಡಾಯವಾಗಿದ್ದು, ಯಾರಾದರು ಇದನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಶರತ್ ಬಿ. ಖಡಕ್ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟೀನ್ ಮಾರ್ಬನ್ಯಾಂಗ್, ಡಿಸಿಪಿ ಕಿಶೋರ್‌ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳಿನ ಅತುಲ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಡಿಹೆಚ್‌ಒ ಡಾ. ಎಂ ಎ ಜಬ್ಬಾರ್, ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ್, ಸಹಾಯಕ ಆಯುಕ್ತರಾದ ರಾಮಚಂದ್ರ ಗಡಾದೆ, ರಮೇಶ ಕೋಲಾರ ಸೇರಿ ಆರೋಗ್ಯ ಇಲಾಖೆಯ ಇನ್ನಿತರೆ ಅಧಿಕಾರಿಗಳು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.