ಕಲಬುರಗಿ: ಮಹಾಮಾರಿ ಕೊರೊನಾ ಕುರಿತು ಡಿಸಿಎಂ ಗೋವಿಂದ ಕಾರಜೋಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಡಿಸಿಎಂ ಕಾರಜೋಳ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್-19 ಸಭೆಯಲ್ಲಿ, ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಚರ್ಚಿಸಲಾಯಿತು. ಜಿಲ್ಲೆಯ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂಗೆ ಮಾಹಿತಿ ನೀಡಿದರು.
ಸಂಸದ ಉಮೇಶ್ ಜಾಧವ್, ಜಿಲ್ಲಾಧಿಕಾರಿ ಬಿ.ಶರತ್ ಸೇರಿದಂತೆ ಶಾಸಕರು, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.