ಕಲಬುರಗಿ: ಜನರ ಆಕ್ರೋಶಕ್ಕೆ ಮಣಿದ ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಗೋವಿಂದ ಕಾರಜೋಳ ಕಡೆಗೂ ಜಿಲ್ಲೆಗೆ ಆಗಮಿಸುತ್ತಿದ್ದು, ಅಭಿವೃದ್ದಿ ಪರಿಶೀಲನಾ ಸಭೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಗ್ಗೆ 9:45 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಡಿಸಿಎಂ ಕಾರಜೋಳ, 11 ಕ್ಕೆ ಗುಲ್ಬರ್ಗ ವಿವಿಯಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕೋವಿಡ್ ನಿಯಂತ್ರಣದ ಕುರಿತು ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬಳಿಕ 3:30 ಕ್ಕೆ ಕಲಬುರಗಿಯಿಂದ ರಸ್ತೆ ಮೂಲಕ ಹೈದರಾಬಾದ್ಗೆ ಪ್ರಯಾಣಸಲಿದ್ದು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ. ಡಿಸಿಎಂ ಕಾರಾಜೋಳ ಅವರು ಜಿಲ್ಲೆಗೆ ಬರುತ್ತಿಲ್ಲ, ಇಲ್ಲಿನ ಜನರ ಸಮಸ್ಯೆ ಆಲಿಸುತ್ತಿಲ್ಲ ಅವರನ್ನು ಬದಲಾಯಿಸಿ ಸ್ಥಳೀಯ ಶಾಸಕರಿಗೆ ಉಸ್ತುವಾರಿ ನೀಡುವಂತೆ ಆಗ್ರಹ ಕೇಳಿ ಬಂದಿತ್ತು.