ಕಲಬುರಗಿ: ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ಅಥವಾ 2020ರ ಜನವರಿ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸಬೇಕೆಂಬ ಉದ್ದೇಶವಿದೆ. ಆದರೆ ಡಿಸೆಂಬರ್ ತಿಂಗಳಲ್ಲಿಯೇ ರಾಜ್ಯದಲ್ಲಿ ಉಪಚುನಾವಣೆ ನಡೆದರೆ ಸಮ್ಮೇಳನ ಆಯೋಜನೆಗೆ ಸಮಸ್ಯೆಯಾಗಲಿದೆ ಎಂದರು.
ಇನ್ನು ಈ ಕುರಿತಾಗಿ ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಜೊತೆ ಚರ್ಚೆ ಮಾಡಿದ್ದು, 2020ರ ಜನವರಿ ತಿಂಗಳು ಸಮ್ಮೇಳನಕ್ಕೆ ಪ್ರಶಸ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.