ಸೇಡಂ : ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿ ಗಲಭೆಯ ಹಿಂದೆ ಯಾವುದೇ ರಾಜಕೀಯ ಪಿತೂರಿ ಇಲ್ಲ. ಒಂದು ದೊಡ್ಡ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಸುಳ್ಳಾರೋಪ ಮಾಡಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಅಖಂಡತೆ, ಏಕತೆ, ಭದ್ರತೆಗೆ ಧಕ್ಕೆ ತರುವವರನ್ನು ಮಟ್ಟ ಹಾಕುವವರೆಗೂ ಬಿಡಲ್ಲ. ಬೆಂಗಳೂರಿನ ಡಿ.ಜೆ.ಹಳ್ಳಿ ಘಟನೆಯನ್ನು ಪೊಲೀಸ್ ಇಲಾಖೆ ಸಮರ್ಥವಾಗಿ ನಿಭಾಯಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಿಕೆಶಿ ಸುಳ್ಳಾರೋಪ ಮಾಡುವುದು ಸರಿಯಲ್ಲ ಎಂದರು.