ETV Bharat / state

ಕಲಬುರಗಿಯಲ್ಲಿ ವೆಂಟಿಲೇಟರ್​ ಸಿಗದೆ ಮಹಿಳೆ ಸಾವು.. ಮೃತಳ ಸಂಬಂಧಿಕರ ಆರೋಪ

ವೆಂಟಿಲೇಟರ್ ವ್ಯವಸ್ಥೆ ಕೂಡ ಸಿಕ್ಕಿಲ್ಲದ ಕಾರಣ ಮೂರ್ನಾಲ್ಕು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರು. ಹೀಗಾಗಿ, ಅವರು ಮೃತಪಟ್ಟಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ..

The dead woman
ಮೃತ ಮಹಿಳೆ
author img

By

Published : Jul 28, 2020, 7:45 PM IST

ಕಲಬುರಗಿ : ಸಕಾಲಕ್ಕೆ ವೆಂಟಿಲೇಟರ್ ಸಿಗದ ಕಾರಣ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಚಿತ್ತಾಪುರ ತಾಲೂಕು ವಾಡಿ‌ ಪಟ್ಟಣದ ಶಾಂತಾಬಾಯಿ ಆಕುಸಖಾನೆ (46) ಮೃತ ಮಹಿಳೆ. ಪಟ್ಟಣದಲ್ಲಿ ಟೀ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಮಹಿಳೆ, ಇಂದು ಬೆಳಗ್ಗೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ತಕ್ಷಣ ಕಲಬುರಗಿ ಜಿಮ್ಸ್ ಆಸ್ಪತ್ರೆ ಕರೆತರಲಾಗಿದೆ. ಆದರೆ, ಇಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿಲ್ಲ.

ವೆಂಟಿಲೇಟರ್ ವ್ಯವಸ್ಥೆ ಕೂಡ ಸಿಕ್ಕಿಲ್ಲದ ಕಾರಣ ಮೂರ್ನಾಲ್ಕು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರು. ಹೀಗಾಗಿ, ಅವರು ಮೃತಪಟ್ಟಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಮೃತದೇಹದಿಂದ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ಕೊರೊನಾ ಪರೀಕ್ಷೆಗೆ ರವಾನಿಸಲಾಗಿದೆ.

ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತ ಸಾವು..

ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಜಿಲ್ಲೆಯಲ್ಲಿ ಈ ಹಿಂದೆ ಅಂಗನವಾಡಿ ಕಾರ್ಯಕರ್ತೆ ಸೇರಿ ಮೂವರಿಗೆ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ ಎಂಬ ಆರೋಪ ಮಾಸುವ ಮುನ್ನವೇ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.