ಕಲಬುರಗಿ: ಸಾಲಬಾಧೆ ತಾಳದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮುನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಣಶೇಖರ್ ಕೊಡ್ಲಿ (40) ಆತ್ಮಹತ್ಯೆಗೆ ಶರಣಾದ ರೈತ. ಕೃಷಿ ಚಟುವಟಿಕೆಗಾಗಿ ಲಕ್ಷಾಂತರ ರೂ. ಕೊಟ್ಟು ಜಮೀನು ಅಡ ಹಾಕಿಕೊಂಡಿದ್ದ ಗುಣಶೇಖರ್, ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿ ಸಂಕಷ್ಟಕ್ಕೆ ಸಿಲುಕಿದ್ದ. ಅಲ್ಲದೆ ಪಿಕೆಪಿಎಸ್ ಸೇರಿ ಇತರೆ ಖಾಸಗಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಲಕ್ಷಾಂತರ ರೂ. ಸಾಲ ಮಾಡಿದ್ದ. ಬೆಳೆ ನಷ್ಟದಿಂದ ಸಾಲಬಾಧೆ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.