ಕಲಬುರಗಿ: ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಅನ್ವಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ ಆಗ್ರಹಿಸಿದ್ದಾರೆ.
ಕಲಬುರ್ಗಿಯಲ್ಲಿ ಮಾತಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿಗೆ 25% ರಷ್ಟು ಹಾಗೂ ಪರಿಶಿಷ್ಟ ಪಂಗಡದವರಿಗೆ 7% ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ನ್ಯಾ.ನಾಗಮೋಹನದಾಸ್ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಅದರ ಅನ್ವಯ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು.
ಡಿ.10 ರಂದು ನಾಗಮೋಹನದಾಸ್ ಅವರು ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದು, ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಜನಾಂಗದವರೊಂದಿಗೆ ಸಂವಾದ ನಡೆಸಲ್ಲಿದ್ದಾರೆ ಎಂದು ತಿಳಿಸಿದರು.