ಕಲಬುರಗಿ:ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಹೊತ್ತಿನಲ್ಲಿ ರಾಜ್ಯ ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಮನಿ ಅವರಿಗೆ ಮತ್ತೆ ಲಘು ಹೃದಯಾಘಾತವುಂಟಾಗಿದೆ. ಆರೋಗ್ಯ ಸ್ಥೀತಿ ಗಂಭೀರ ಕಾರಣ ಅವರನ್ನುಹೆಚ್ವಿನ ಚಿಕಿತ್ಸೆಗೆ ಶುಕ್ರವಾರ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ಏರ್‌ಲಿಫ್ಟ್ ಮೂಲಕ ಕರೆದೊಯ್ಯಲಾಯಿತು.
ನಗರದ ಯುನೈಟೆಡ್ ಆಸ್ಪತ್ರೆಯಿಂದ ವಿಮಾನ ನಿಲ್ದಾಣವರೆಗೆ ಜಿರೋ ಟ್ರಾಫಿಕ್ ನಲ್ಲಿ ಅವರನ್ನ ಕರೆದೊಯ್ಯಲಾಯಿತು. ಆಂಬ್ಯುಲೆನ್ಸ್ ಮುಂದೆ ಪೊಲೀಸ್ ವಾಹನ ತೆರಳುವ ಮೂಲಕ ರಸ್ತೆ ಟ್ರಾಫಿಕ್ ಕ್ಲಿಯರ್ ಮಾಡಿಕೊಟ್ಟರು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಅನ್ನಪೂರ್ಣ ಕ್ರಾಸ್, ಖರ್ಗೆ ಬಂಕ್ ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ಮೂಲಕ ಕರದೊಯ್ಯಲಾಯಿತು. ಸಂಸದ ಡಾ. ಉಮೇಶ ಜಾಧವ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ್, ಕೃಷ್ಣ ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ಸಾಥ್ ನೀಡಿದರು.
ಅಪಘಾತ: ಜೇವರ್ಗಿ ಹೆದ್ದಾರಿಯ ಫರತಾಬಾದ ಬಳಿ ಚಿಕ್ಕದೊಂದು ಅಪಘಾತವಾಗಿ ಧರ್ಮಣ್ಣ ಅವರ ಮುಂಗೈಗೆ ಪೆಟ್ಟಾಗಿತ್ತು. ಅವರನ್ನು ನ.11 ರಂದು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಬಿಡುಗಡೆಯಾಗಬೇಕು ಅನ್ನುವಷ್ಟರಲ್ಲಿ ಬುಧವಾರ ಬೆಳಗ್ಗೆ ಲಘು ಹೃದಯಾಘಾತವಾಗಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಹೆಚ್ಚಿನ ಚಿಕಿತ್ಸೆಗೆ ಏರ್‌ಲಿಫ್ಟ್ ಮೂಲಕ ಬೆಂಗಳೂರು ಮಣಿಪಾಲ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ.
ಇದನ್ನೂ ಓದಿ:ಶಾಲಾ ಮಕ್ಕಳಿದ್ದ ಆಟೋ ಪಲ್ಟಿ: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ