ಕಲಬುರಗಿ : ನಗರದ ಉರ್ದು ಶಾಲೆಯಲ್ಲಿ ಹಿಜಾಬ್ ಧರಿಸಿ ಕ್ಲಾಸ್ ರೂಂಗೆ ವಿದ್ಯಾರ್ಥಿನಿಯರು ಆಗಮಿಸಿದ ಪ್ರಕರಣ ಕುರಿತು ಬಿಇಒ ಶಂಕ್ರಮ್ಮ ಡವಳಗಿ ಪ್ರತಿಕ್ರಿಯೆ ನೀಡಿದ್ದಾರೆ.
ವಸ್ತ್ರ ಸಂಹಿತೆ ನಿಯಮ ಉಲ್ಲಂಘನೆಯಾದ ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ಉರ್ದು ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಶಿಕ್ಷಕರು ಬರುವ ಮುನ್ನ ಮಕ್ಕಳು ಹಿಜಾಬ್ ಧರಿಸಿದ್ದರು. ಅವರು ಕ್ಲಾಸ್ ರೂಮ್‌ಗೆ ಆಗಮಿಸಿದ ನಂತರ ಹಿಜಾಬ್ ತೆಗೆಸಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ವಸ್ತ್ರ ಸಂಹಿತೆ ನಿಯಮ ಉಲ್ಲಂಘನೆ ಆಗಿಲ್ಲ. ಆದಾಗ್ಯೂ, ಏನಾದ್ರೂ ಗೊಂದಲ ಆಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕ್ಲಾಸ್‌ಗೆ ಅಟೆಂಡ್
ಹೈಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿ ಚಿಂಚೋಳಿ ಪಟ್ಟಣದಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕ್ಲಾಸ್‌ಗೆ ಅಟೆಂಡ್ ಆಗಿದ್ದಾರೆ. ಚಿಂಚೋಳಿ ಪಟ್ಟಣದ ಉರ್ದು ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಶಾಲಾ ಕೋಣೆಯಲ್ಲಿ ಪಾಠ ಕೇಳುತ್ತಿದ್ದಾರೆ. ಇಲ್ಲಿನ ಸಿಬ್ಬಂದಿ ಕೂಡ ಹಿಜಾಬ್ ಹಾಕಿಕೊಂಡೇ ಪಾಠ ಹೇಳುತ್ತಿದ್ದಾರೆ.
ಈ ಶಾಲೆಯಲ್ಲಿ ಹೈಕೋರ್ಟ್ ಆದೇಶ ಪಾಲನೆ ಆಗುತ್ತಿಲ್ಲ. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಹೈಕೋರ್ಟ್ ಆದೇಶಕ್ಕೆ ಕ್ಯಾರೇ ಅನ್ನುತ್ತಿಲ್ಲ. ಪೊಲೀಸರು ಇದ್ದರೂ ಕೂಡ ಯಾವುದೇ ತಿಳಿ ಹೇಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಓದಿ: ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ DC ಮಹಾಂತೇಶ್ ಬೀಳಗಿ