ETV Bharat / state

ಸಿಎಂ ಕಂಪ್ಲೀಟ್ಲಿ ಹೆಲ್ಪ್‌ಲೆಸ್‌, ಕುರ್ಚಿಗಾಗಿ ಸಾಮರಸ್ಯ ಹಾಳುಗೆಡವ್ತಿದಾರೆ.. ಅವ್ರು ಈಶ್ವರಪ್ಪ ಮೇಲೆ ಕ್ರಮಕೈಗೊಳ್ತಾರಾ.. ಪ್ರಿಯಾಂಕ್ ಖರ್ಗೆ - ಸಂತೋಷ ಪಾಟೀಲ್ ಆತ್ಮಹತ್ಯೆ ಕುರಿತು ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯೆ

ಸಿಎಂ ಬಸವರಾಜ್ ಬೊಮ್ಮಾಯಿ‌ ಆರ್‌ಎಸ್‌ಎಸ್ ಕೈಗೊಂಬೆಯಾಗಿದ್ದು, ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ವಿರುದ್ಧ ಸಿಎಂ ಕ್ರಮ ತೆಗೆದುಕೊಂಡಿಲ್ಲ. ಅಂತದ್ರಲ್ಲಿ ಓರ್ವ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು‌ ದೂರಿದರು..

Priyank Kharge
ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ
author img

By

Published : Apr 12, 2022, 5:44 PM IST

ಕಲಬುರಗಿ : ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ಡೆತ್ ಮೆಸೇಜ್​​​ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಉಲ್ಲೇಖವಿರುವುದರಿಂದ ಅವರನ್ನ ವಜಾ ಮಾಡಬೇಕು. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕು ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಗುತ್ತಿಗೆದಾರರು ಈ ಮುಂಚೆ ಸರ್ಕಾರ ಶೇ.40 ಕಮಿಷನ್ ಬೇಡಿಕೆ ಇಟ್ಟಿದೆ ಎಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಆದರೂ ಕೂಡ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಪ್ರತಿಯೊಂದಕ್ಕೂ ಸರ್ಕಾರ ದಾಖಲೆ ಕೇಳುತ್ತಿದೆ. ಈಗ ಒಂದು ಜೀವ ಹೋಗಿದೆ, ಇದಕ್ಕಿಂತ ಪ್ರೂಫ್ ಬೇಕಾ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದ ಕುರಿತಂತೆ ಸರ್ಕಾರದ ವಿರುದ್ಧ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿರುವುದು..

ಅಧಿವೇಶನದಲ್ಲಿ ಚರ್ಚಿಸಲು ಅವಕಾಶ ನೀಡಲಿಲ್ಲ : 40 ಪರ್ಸೆಂಟ್ ಕಮೀಷನ್ ಬಗ್ಗೆ ಈ ಹಿಂದೆ ಅನೇಕ ಬಾರಿ ಸಂತೋಷ ಹೇಳಿದ್ದರು. ಆದರೆ, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರಲಿಲ್ಲ. 'ನಾ ಖಾವುಂಗಾ.. ಖಾನೇಕೋಭಿ ನಹಿ ದೇವುಂಗಾ' ಎಂದು ಪ್ರಧಾನಿ ಹೇಳಿದ್ದರು. ಆದರೆ, ಸರ್ಕಾರದಲ್ಲಿ ಎಲ್ಲವೂ ನಡೆಯುತ್ತಿದೆ. ಈ ವಿಷಯವನ್ನ ಬೆಳಗಾವಿ-ಬೆಂಗಳೂರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆವು. ಆದರೆ, ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ದುರ್ದೈವವೆಂದರೆ ಚರ್ಚೆ ಮಾಡಲು ನಿಮ್ಮ ಹತ್ತಿರ ಪ್ರೂಫ್ ಇದೆಯಾ ಅಂತಾ ಕೇಳಿದ್ದರು ಎಂದು ಹೇಳಿದರು.

ಸಿಎಂ ಆರ್‌ಎಸ್‌ಎಸ್ ಕೈಗೊಂಬೆ : ಸಿಎಂ ಬಸವರಾಜ್ ಬೊಮ್ಮಾಯಿ‌ ಆರ್‌ಎಸ್‌ಎಸ್ ಕೈಗೊಂಬೆಯಾಗಿದ್ದು, ಅಸಹಾಯಕರಾಗಿದ್ದಾರೆ. ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದವರ ವಿರುದ್ಧ ಸಿಎಂ ಕ್ರಮ ತೆಗೆದುಕೊಂಡಿಲ್ಲ. ಅಂತದ್ರಲ್ಲಿ ಓರ್ವ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರಾ? ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನರ ಹಿತ ಬಲಿ ಕೊಡುತ್ತಿದ್ದಾರೆ ಎಂದು‌ ದೂರಿದರು.

ಇದನ್ನೂ ಓದಿ: ಸಚಿವ ಈಶ್ವರಪ್ಪನವ್ರು ಅರೆಸ್ಟ್ ಆಗೋವರೆಗೂ ಸಂತೋಷ್​​​ನ ಅಂತ್ಯಕ್ರಿಯೆ ಮಾಡಲ್ಲ.. ಮತೃನ ಸೋದರ ಪ್ರಶಾಂತ್‌

ಸಂತೋಷ ಪಾಟೀಲ್ ಡೆತ್ ಮೆಸೇಜ್​ನಲ್ಲಿ ತಮ್ಮ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಅವರ ಆತ್ಮಹತ್ಯೆಗೆ ಪ್ರೇರಣೆ ಎಂದು ಕೇಸ್​​ ದಾಖಲಿಸಬೇಕು. ಜೊತೆಗೆ ನ್ಯಾಯಾಧೀಶರಿಂದ ಸಮಗ್ರ ತನಿಖೆವಾಗುವರೆಗೆ ಈಶ್ವರಪ್ಪನವರನ್ನ ವಜಾಗೊಳಿಸಬೇಕು ಎಂದು ಪುನರುಚ್ಚರಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.