ಕಲಬುರಗಿ: ಕೊರೊನಾ ಭೀತಿ ಹಿನ್ನೆಲೆ ಜಿಲ್ಲೆಯಾದ್ಯಂತ ಮಂದಿರ, ಮಸೀದಿ, ಚರ್ಚ್, ಗುರುದ್ವಾರಗಳಲ್ಲಿ ಜನ ದಟ್ಟಣೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಬಿ.ಶರತ್ ಆದೇಶಿಸಿದ್ದಾರೆ.
ಈ ಕುರಿತು ಸುತ್ತೊಲೆ ಹೊರಡಿಸಿರುವ ಅವರು, ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈಗಾಗಲೇ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಎಂದು ಆದೇಶ ಹೊರಡಿಸಿದರು. ಜಿಲ್ಲೆಯಾದ್ಯಂತ ಮಂದಿರ, ಮಸೀದಿ, ಚರ್ಚ್, ಗುರುದ್ವಾರಗಳಲ್ಲಿ ಹೆಚ್ಚಿನ ಜನ ಸೇರದಂತೆ ಜನ ದಟ್ಟಣೆಯಾಗದಂತೆ ಪ್ರಾರ್ಥನೆಗೆ ವ್ಯವಸ್ಥೆ ಕಲ್ಪಿಸುವಂತೆ ಎಲ್ಲಾ ಧರ್ಮದ, ಧಾರ್ಮಿಕ ಕೇಂದ್ರಗಳಿಗೆ ಆದೇಶಿಸಿದ್ದಾರೆ.

ಸಿಆರ್ಪಿಸಿ ಸೆಕ್ಷನ್ 1973 ಕಲಂ 133 ಅಡಿ ಜಿಲ್ಲಾಧಿಕಾರಿ ಬಿ. ಶರತ್ ಈ ಆದೇಶ ಹೊರಡಿಸಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.