ಕಲಬುರಗಿ: ಲಾಕ್ಡೌನ್ ಹಿನ್ನೆಲೆ ಕಲಬುರಗಿಯಲ್ಲಿ ಸಂಕಷ್ಟಕ್ಕೊಳಗಾದ ಆಟೋ ಚಾಲಕರಿಗೆ ರಾಜ್ಯ ಸರ್ಕಾರದಿಂದ ದಿನಸಿ ಕಿಟ್ ವಿತರಿಸಲಾಗುತ್ತಿದೆ.
ನಗರದ ರೋಟರಿ ಶಾಲೆಯ ಆವರಣದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತು ಖನೀಸಾ ಫಾತಿಮಾ, 5 ಸಾವಿರ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಿದರು.
ಕಿಟ್ ವಿತರಣೆ ವೇಳೆ ಕೆಲಕಾಲ ನೂಕುನುಗ್ಗಲು ಉಂಟಾಗಿದ್ದು, ಪೊಲೀಸರು ಹರಸಾಹಸ ಪಡಬೇಕಾಯಿತು.