ಕಲಬುರಗಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮೇ 7 ರವರೆಗೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಭೀತಿಯಿಂದ ಜನರು ಗುಂಪಾಗಿ ಸೇರುವುದನ್ನು ತಪ್ಪಿಸಲು ಜಿಲ್ಲೆಯಲ್ಲಿ ಸಿಆರ್‌ಪಿಸಿ ಕಾಯ್ದೆ 1973 ರನ್ವಯ ಕಲಂ144 ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಬಳಿಕ ಏಪ್ರಿಲ್ 19 ರಂದು ಏ.30 ರವರೆಗೆ ವಿಸ್ತರಿಸಲಾಗಿತ್ತು.
ಕಾಯ್ದೆ ಅನ್ವಯ ಜನರು ಗುಂಪಾಗಿ ಸೇರುವುದು, ಸಭೆ, ಸಮಾರಂಭ, ಜಾತ್ರೆ, ಉರುಸ್ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದಕ್ಕೆ ಅವಕಾಶವಿಲ್ಲ.