ETV Bharat / state

ಅಕ್ಷರ ಜಾತ್ರೆಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್​​ ಸಮಿತಿಯಿಂದ 7 ಲಕ್ಷ ರೂ. ದೇಣಿಗೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ಏಳು ಲಕ್ಷ ರೂಪಾಯಿಗಳನ್ನು ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ನೇತೃತ್ವದಲ್ಲಿ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೆದಾರ ಜಿಲ್ಲಾ ಪಂಚಾಯತ್​ ಸಿಇಒ ಡಾ. ಪಿ.ರಾಜಾ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಪ್ರಿಯಾಂಕ್​ ಖರ್ಗೆ
Priyank M. Kharge
author img

By

Published : Jan 31, 2020, 1:25 PM IST

Updated : Jan 31, 2020, 2:25 PM IST

ಕಲಬುರಗಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಏಳು ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು.

ಹಾಲಿ ಶಾಸಕರು ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿದ್ದ ಒಟ್ಟು ಏಳು ಲಕ್ಷ ರೂಪಾಯಿಗಳನ್ನು ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ನೇತೃತ್ವದಲ್ಲಿ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೆದಾರಜಿಲ್ಲಾ ಪಂಚಾಯತ್​ ಸಿಇಒ ಡಾ. ಪಿ.ರಾಜಾ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 7 ಲಕ್ಷ ದೇಣಿಗೆ ನೀಡಿದ ಕಾಂಗ್ರೆಸ್ ಜಿಲ್ಲಾ ಸಮಿತಿ

ನಂತರ ಮಾತನಾಡಿದ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ, ಸಮ್ಮೇಳನಕ್ಕೆ ಕೇವಲ ಐದು ದಿನ ಮಾತ್ರ ಬಾಕಿ ಇದ್ದು, ಇಲ್ಲಿವರೆಗೂ ಸರ್ಕಾರದಿಂದ ಹಣ ಬಿಡುಗಡೆ ಮಾಡದಿರುವುದು ಖಂಡನಾರ್ಹ ಎಂದು ಕಿಡಿಕಾರಿದರು. ಅಳಿಲು ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಏಳು ಲಕ್ಷ ದೇಣಿಗೆ ಸಂಗ್ರಹಿಸಿ‌ ನೀಡಲಾಗುತ್ತಿದೆ. ಸದ್ಯಕ್ಕೆ ಸಮಯ ಕಡಿಮೆ ಇದ್ದು, ಬರುವ ಫೆ. 3ರರವರೆಗೆ ಇನ್ನಷ್ಟು ದೇಣಿಗೆ ಸಂಗ್ರಹಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

Last Updated : Jan 31, 2020, 2:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.