ಕಲಬುರಗಿ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಅವರ ಅಭಿಮಾನಿ ಬಳಗ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲರಾದ್ರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಅಣುಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಡಿಕೆಶಿ ಚಾರಿತ್ರ್ಯವಧೆ ಮಾಡಿದೆ. ಈ ಮೂಲಕ ರಾಜಕೀಯವಾಗಿ ಅವರನ್ನು ಮುಗಿಸಲು ಹೊರಟಿದೆ ಎಂದು ಆರೋಪಿಸಿದ್ರು.
ಬಳಿಕ ಮೋದಿ ಹಾಗೂ ಅಮಿತ್ ಶಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿದ್ರು. ಕೇಂದ್ರ ಸರ್ಕಾರ, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುವುದನ್ನು ಬಿಟ್ಟು ತಕ್ಷಣ ಡಿಕೆಶಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಇದೇ ವೇಳೆ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಡಿಕೆಶಿ ಅವರೊಂದಿಗೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ.