ETV Bharat / state

ಆಸ್ಪತ್ರೆಯಲ್ಲಿ ಸೋಂಕಿತರನ್ನು ಭಿಕ್ಷುಕರಿಗಿಂತ ಕೀಳಾಗಿ ಕಾಣ್ತಾರೆ: ಕಲಬುರಗಿಯಲ್ಲಿ ರೋಗಿಗಳ ಗಂಭೀರ ಆರೋಪ - ಕಲಬುರಗಿ

ಕೊರೊನಾ ಸೋಂಕಿತರು ಹಾಗೂ ಕ್ವಾರಂಟೈನ್ ನಲ್ಲಿ ಇರುವವರನ್ನು ಭಿಕ್ಷುಕರಿಗಿಂತ ಕಡೆಯಾಗಿ ಕಾಣಲಾಗುತ್ತಿದೆಯಂತೆ. ರೋಗಿಗಳಿಗೆ ಕುಡಿಯಲು ನೀರಿನ ಕೊರತೆ ಇದ್ದು, ಶಂಕಿತರನ್ನು ಸರಿಯಾಗಿ ತಪಾಸಣೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಮತ್ತಷ್ಟು ಜನರು ಈ ಸೋಂಕಿಗೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Doctors are not properly treated to patients in kalabari Hospital
ಕಲಬುರಗಿ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ಆರೋಪ
author img

By

Published : Apr 28, 2020, 2:17 PM IST

Updated : Apr 28, 2020, 4:25 PM IST

ಕಲಬುರಗಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಇಎಸ್‌ಐ ಮತ್ತು ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕೋವಿಡ್ ಸೆಂಟರ್​ಗಳಲ್ಲಿ ಹೇಳೋರಿಲ್ಲ, ಕೇಳೋರಿಲ್ಲ ಎಂಬಂತಾಗಿದೆ. ಸ್ವಚ್ಛತೆ ಅನ್ನೋದಂತೂ ಮರೀಚಿಕೆಯಾಗಿದೆ. ರೋಗಿಗಳನ್ನು ಹಾಗೂ ಕ್ವಾರಂಟೈನ್ ಮಾಡಿದವರನ್ನು ಭಿಕ್ಷುಕರಿಗಿಂತ ಕೀಳಾಗಿ ಕಾಣಲಾಗುತ್ತಿದೆಯಂತೆ. ರೋಗಿಗಳಿಗೆ ಕುಡಿಯಲು ನೀರಿನ ಕೊರತೆ ಇದ್ದು, ಶಂಕಿತರನ್ನು ಸರಿಯಾಗಿ ತಪಾಸಣೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಮತ್ತಷ್ಟು ಜನರು ಈ ಸೋಂಕಿಗೆ ಒಳಗಾಗುತ್ತಿದ್ದಾರೆ. ಸೋಂಕಿತರ ಬಳಿ ವೈದ್ಯಕೀಯ ಸಿಬ್ಬಂದಿ ಹೊರತುಪಡಿಸಿ ಯಾರೂ ಕೂಡ ಹೋಗುವ ಹಾಗಿಲ್ಲ. ಆದರೆ, ಇಲ್ಲಿ ವೈದ್ಯರು ಬಾರದ ಕಾರಣ ಸಂಬಂಧಿಕರೇ ರೋಗಿಗಳ ಆರೈಕೆ ಮಾಡುತ್ತಿದ್ದು, ಇನ್ನಷ್ಟು ಜನ ಈ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.

ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಇಲ್ಲದಿದ್ರೆ ಕೊರೊನಾ ಮಹಾಮಾರಿ ಎಲ್ಲಾ ಕಡೆ ವಿಸ್ತರಿಸಿ ಜನರನ್ನು ಬಲಿ ತೆಗೆದುಕೊಳ್ಳುತ್ತದೆ ಎಂಬುದು ಸ್ಥಳೀಯರ ಆತಂಕವಾಗಿದೆ.

ಈ ಸಂಬಂಧ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ, ಶಾಸಕ ಅಜಯಸಿಂಗ್ ಅವರು ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದರು.

Last Updated : Apr 28, 2020, 4:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.