ಕಲಬುರಗಿ: ಜಿಲ್ಲೆಯಲ್ಲಿ ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ ಮತ್ತು ಆತನ ಸಹೋದರ ಗಂಗಣ್ಣ ಕೊಲೆಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಹಳೇ ದ್ವೇಷವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.