ಕಲಬುರಗಿ: ಕರ್ನಾಟಕ ರಾಜ್ಯ ಎಸ್.ಸಿ ಮತ್ತು ಎಸ್.ಟಿ. ನೌಕರರ ಸಂಘ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಅರ್.ಅಂಬೇಡ್ಕರ್ ಅವರ 63ನೇ ಮಹಾ ಪರಿನಿರ್ವಾಣ ಕಾರ್ಯಕ್ರಮ ನಡೆಯಿತು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಶರತ್ ಬಿ. ಸೇರಿದಂತೆ ಅಧಿಕಾರಿಗಳು, ಗಣ್ಯರು ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಸಮಾರಂಭದಲ್ಲಿ ಬುದ್ಧ ವಿಹಾರದ ಸಮಗಾನಂದ ಭಂತೇಜಿ, ಎಸ್.ಪಿ. ಯಡಾ ಮಾರ್ಟಿನ್ ಮಾರ್ಬ ನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ ಮತ್ತಿತರ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.