ETV Bharat / state

ಕಲಬುರಗಿಯಲ್ಲಿ ಸರಳವಾಗಿ ಡಾ.ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.. - Dr BR Ambedkar Jayanti Celebration

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‌ ಡೌನ್ ಇರುವುದರಿಂದ ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಕಲಬುರಗಿ ಜಿಲ್ಲಾದ್ಯಾಂತ ಸರಳವಾಗಿ ಆಚರಿಸಲಾಯಿತು.

Dr BR Ambedkar Jayanti Celebration in Kalaburagi
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
author img

By

Published : Apr 14, 2020, 1:56 PM IST

ಕಲಬುರಗಿ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿ‌ ಹಿನ್ನೆಲೆ ಜಗತ್ ವೃತ್ತದಲ್ಲಿರುವ ಮಹಾ ಮಾನವತಾವಾದಿಯ ಪ್ರತಿಮೆಗೆ ಜಿಲ್ಲಾಧಿಕಾರಿ ಶರತ್ ಬಿ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವುದರಿಂದ ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಡಿಸಿ ಶರತ್ ಬಿ ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್‌ಕುಮಾರ್ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಸರಳವಾಗಿ ಜಯಂತಿ ಆಚರಿಸಿದರು.

ಪ್ರತಿವರ್ಷ ಕಲಬುರಗಿ ನಗರ, ವಾಡಿ ಪಟ್ಟಣ ಸೇರಿ ಜಿಲ್ಲೆಯಾದ್ಯಂತ ಹಲವೆಡೆ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿತ್ತು. ಕೊರೊನಾ ಕಂಟಕ ಎದುರಾಗಿರುವ ಕಾರಣ ಈ ಬಾರಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಮನೆಯಲ್ಲೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗ ಆಚರಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.