ಕಲಬುರಗಿ: ಕಲುಷಿತ ನೀರು ಸೇವನೆಯಿಂದ 40ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು, ಚಿಕಿತ್ಸೆ ಪಡೆಯುತ್ತಿರುವ ಘಟನೆ ಜೇವರ್ಗಿ ತಾಲೂಕಿನ ಮಂದೇವಾಲ ತಾಂಡಾದಲ್ಲಿ ನಡೆದಿದೆ. ಏಕಾಏಕಿ ಗ್ರಾಮದಲ್ಲಿನ ಜನರಲ್ಲಿ ವಾಂತಿ, ಭೇದಿ ಶುರುವಾಗಿದೆ. ಮಹಿಳೆಯರು, ಮಕ್ಕಳು ಸೇರಿ ನಲವತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.
ಕೆಲವರಿಗೆ ಮಂದೇವಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾಗೂ 15ಕ್ಕೂ ಹೆಚ್ಚು ಜನರನ್ನ ಜೇವರ್ಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಮೂವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಸರಬರಾಜಾದ ಕಲುಷಿತ ನೀರು ಸೇವನೆಯಿಂದ ಜನ ಅಸ್ವಸ್ಥಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ಬಳ್ಳಾರಿ: ಕಲುಷಿತ ನೀರು ಸೇವನೆ, 84 ಮಂದಿ ಆಸ್ಪತ್ರೆಗೆ ದಾಖಲು