ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಫರತಾಬಾದ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಆದಪ್ಪ ಡೊಣೂರ (60) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಆದಪ್ಪ ಸಣ್ಣನೀರಾವರಿ ಇಲಾಖೆಯಲ್ಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು.
![Driver lost control over car](https://etvbharatimages.akamaized.net/etvbharat/prod-images/3744130_klb.jpg)
ಲಕ್ಷ್ಮೀಪುರದಿಂದ ಕಲಬುರಗಿ ಆಸ್ಪತ್ರೆಗೆಂದು ಕಾರಲ್ಲಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಫರತಾಬಾದ ಬಳಿ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಆದಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.