ಕಲಬುರಗಿ: ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬಂದ 11 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಮೂವರು ಮಕ್ಕಳು ಸೇರಿ 11 ಜನರಿಗೆ ಸೋಂಕು ಕಾಣಿಕೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ.
ದಿನೇ ದಿನೇ ಪ್ರಕರಣಗಳು ಏರಿಕೆಯಾಗುತ್ತಲಿದ್ದು, ಜನರಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದೆ. ಸದ್ಯ ಸೋಂಕಿತರೆಲ್ಲರನ್ನೂ ಐಸೋಲೇಷನ್ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.