ಸೇಡಂ(ಕಲಬುರಗಿ) : ಸಿಎಂ ಕೊರೊನಾ ಪರಿಹಾರ ನಿಧಿಗೆ ತಮ್ಮ ಶಾಸಕತ್ವದ ಪಿಂಚಣಿ ಹಣ ನೀಡುವ ಮೂಲಕ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಇತರರಿಗೆ ಮಾದರಿಯಾಗಿದ್ದಾರೆ.
ಬುಧವಾರ ಸಹಾಯಕ ಆಯುಕ್ತ ರಮೇಶ ಕೋಲಾರ ಅವರನ್ನು ಭೇಟಿಯಾದ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರು, ಸಿಎಂ ಕೊರೊನಾ ಪರಿಹಾರ ನಿಧಿಗೆ ತಮ್ಮ ಪಿಂಚಣಿ ಹಣ 45,000 ರೂಪಾಯಿಗಳ ಚೆಕ್ ಹಸ್ತಾಂತರಿಸಿದ್ದಾರೆ.