ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲೆಯಾದ್ಯಂತ ಮೇ.31ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
![Expansion of lockdown to control rising corona](https://etvbharatimages.akamaized.net/etvbharat/prod-images/kn-klb-01-prohibition-extension-ka10021_17052020071444_1705f_1589679884_290.jpeg)
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಆರ್ಪಿಸಿ 1973 ಕಲಂ 144 ಸೆಕ್ಷನ್ ಅಡಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ನಿನ್ನೆ ಮತ್ತೆ 8 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 94 ಕೊರೊನಾ ಕೇಸ್ ಪತ್ತೆಯಾಗಿವೆ. ಇಲ್ಲಿಯವರೆಗೆ ಏಳು ಜನ ಮಹಾಮಾರಿಗೆ ಬಲಿಯಾಗಿದ್ದಾರೆ.