ಕಲಬುರಗಿ: ಕೊರೊನಾ ಭೀತಿ ಹಿನ್ನೆಲೆ ಜಿಲ್ಲೆಯಲ್ಲಿ ಘೋಷಿಸಿದ್ದ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.
ಕಲಬುರಗಿಯಲ್ಲಿ ಕೊರೊನಾದಿಂದ ಓರ್ವ ವೃದ್ಧ ಸಾವನ್ನಪ್ಪಿದ್ದು, ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳಿಂದ ಸಿಆರ್ಪಿಸಿ ಕಲಂ 144 ಜಾರಿಗೊಳಿಸಲಾಗಿತ್ತು. ಇದೀಗ ನಿಷೇಧಾಜ್ಞೆಯನ್ನು ಮಾ.25 ರ ವರೆಗೆ ವಿಸ್ತರಿಸಿ ಡಿಸಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.