ಕಲಬುರಗಿ: ಕೋವಿಡ್ ನಿರ್ಬಂಧದ ನಡುವೆಯೇ ರಾತ್ರೋರಾತ್ರಿ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ಜಾತ್ರೆ ನಡೆದಿದ್ದು, ರಥೋತ್ಸವದ ವೇಳೆ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಪ್ರತಿ ವರ್ಷ ಮೂರು ದಿನಗಳ ಕಾಲ ನಡೆಯುತ್ತಿದ್ದ ರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಈ ಬಾರಿ ಕೋವಿಡ್ ಹಿನ್ನೆಲೆ ನಿರ್ಬಂಧ ಹೇರಲಾಗಿತ್ತು. ಜೇವರ್ಗಿ ತಹಶೀಲ್ದಾರ್ ಬಸವರಾಜ ಬೆಣ್ಣೂರ ಹಾಗೂ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಜಾತ್ರೆ ನಡೆಸದಂತೆ ಸಲಹೆ ನೀಡಿ ಬಂದಿದ್ದರು. ಆದರೆ ಅಧಿಕಾರಿಗಳ ಕಣ್ತಪ್ಪಿಸಿ ಬೆಳಗಿನ ಜಾವ ಕತ್ತಲಿನಲ್ಲಿಯೇ ರಥೋತ್ಸವ ನಡೆಸಲಾಗಿದೆ.
ಇದನ್ನೂ ಓದಿ: ಬಳ್ಳಾರಿಯಲ್ಲಿ ಹಾಡಹಗಲೇ ಝಳಪಿಸಿದ ಮಚ್ಚು, ಲಾಂಗು: ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!?
ಈ ವೇಳೆ ನೂಕುನುಗ್ಗಲು ಉಂಟಾಗಿ ರಥದ ಚಕ್ರಕ್ಕೆ ಸಿಕ್ಕಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.