ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ನಡೆದಿದೆ.
ಗೊಬ್ಬರವಾಡಿ ಗ್ರಾಮದ ಬಸವರಾಜ ನರೂಣಿ (40) ಮೃತ ರೈತ. ಈತ ಕೃಷಿಗಾಗಿ ಮಾಡಿದ ಸಾಲವನ್ನುಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ ರೈತ ಇಂದು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.