ಕಲಬುರಗಿ : ಸೆ.28ರಂದು ಕರೆ ನೀಡಲಾದ ಕರ್ನಾಟಕ ಬಂದ್‌ಗೆ ಬೆಂಬಲಿಸುವಂತೆ ಕಲಬುರಗಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿಯ ಮುಖಂಡ ಮಾರುತಿ ಮಾನ್ಪಡೆ ವ್ಯಾಪರಸ್ಥರಿಗೆ ಮನವಿ ಮಾಡಿಕೊಂಡರು.
ಕಲಬುರಗಿ ನಗರದ ಸೂಪರ್ ಮಾರ್ಕೇಟ್ ಸೇರಿ ಪ್ರಮುಖ ಮಾರುಕಟ್ಟೆಗಳಿಗೆ ತೆರಳಿ ತರಕಾರಿ, ಬೀದಿ ಬದಿ ವ್ಯಾಪಾರಿಗಳು ಹಾಗೂ ಹೋಟೆಲ್ ಮಾಲೀಕರಿಗೆ ಮನವಿ ಮಾಡಿಕೊಂಡರು. ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ. ಇದರ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯ ಎಂದು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆ ಸೆ.28 ರಂದು ಕರ್ನಾಟಕ ಬಂದ್‌ಗೆ ರೈತಪರ ಸಂಘಟನೆಗಳು ನಿರ್ಧರಿಸಿವೆ. ತಾವುಗಳು ಸಹ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಬೆಂಬಲ ಸೂಚಿಸುವಂತೆ ವ್ಯಾಪಾರಸ್ಥರಿಗೆ ಕರಪತ್ರ ನೀಡಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ 3 ಕರಾಳ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಕೃಷಿಕರನ್ನು ಹಾಳು ಮಾಡಲು ಹೊರಟಿವೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಗುಡುಗಿದರು. 28 ರಂದು ಕಲಬುರಗಿಯ ವ್ಯಾಪಾರಸ್ಥರು ಉದ್ಯಮಿಗಳು, ಆಟೋ ಚಾಲಕರು, ಸಾರ್ವಜನಿಕರು ಬಂದ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.