ETV Bharat / state

ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ - ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ

ಜಮೀನು ಕೆಲಸಕ್ಕೆಂದು ಹೋದ ರೈತ ವಾಪಸ್​ ಮನೆಗೆ ಹಿಂದಿರುಗದೇ ಇದ್ದು, ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗುತ್ತಿದೆ.

Venkatesh
ವೆಂಕಟೇಶ ಕೊಚ್ಚಿ ಹೋದ ರೈತ
author img

By

Published : Aug 4, 2022, 12:29 PM IST

Updated : Aug 4, 2022, 12:35 PM IST

ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ.

ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಳ್ಳಗಳೆಲ್ಲ ನೀರಿನಿಂದ ಭರ್ತಿಯಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿವೆ. ಇದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡಚಣೆಯಾಗಿ ತೊಂದರೆ ಅನುಭವಿಸುವಂತೆ ಆಗಿದೆ.

ಇದನ್ನೂ ಓದಿ : ಯಾದಗಿರಿಯಲ್ಲಿ ಧಾರಾಕಾರ ಮಳೆ: ಜೋಪಡಿಗಳಿಗೆ ನುಗ್ಗಿದ ನೀರು

Last Updated : Aug 4, 2022, 12:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.