ಕಲಬುರಗಿ: ಮುಂಗಾರು ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಛೇರಿ ಎದುರು ಸೇರಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದರಿಂದ ಅಲ್ಪಾವಧಿ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು ಹೆಸರು, ಉದ್ದು ಬೆಳೆಗಳು ರೈತರ ಕೈಸೇರದಂತಾಗಿದೆ ಎಂದು ಸಮಸ್ಯೆ ಹೇಳಿಕೊಂಡರು.
ಬೆಳೆ ಹಾನಿಯ ಸರ್ವೇ ಮಾಡಿಸಿ ಬಂದ ಅಲ್ಪಸ್ವಲ್ಪ ಬೆಳೆಗೂ ಸೂಕ್ತ ದರ ಸಿಗದಂತಾಗಿದೆ. ಸರ್ಕಾರ ಬೆಂಬಲ ಬೆಲೆಯೊಂದಿಗೆ ಹೆಸರು ಖರೀದಿಸುವಂತೆ ಆಗ್ರಹಿಸಿ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.