ಕಲಬುರಗಿ: ರೈತ ಅನುವುಗಾರರಿಗೆ ಮಾಸಿಕ 10 ಸಾವಿರ ರೂಪಾಯಿ ಗೌರವ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶ್ರಮಜೀವಿಗಳ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತು.
ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ರೈತ ಅನುವುಗಾರನ ನೇಮಕ ಮಾಡಬೇಕು. ಅಷ್ಟೇ ಅಲ್ಲದೇ, ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿಕೊಂಡು ಬಂದ ಅನುವುಗಾರರ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸೋದಾಗಿ ಎಚ್ಚರಿಕೆ ನೀಡಿದರು.