ಕಲಬುರಗಿ: ದೇಶಾದ್ಯಂತ ಬಗರ್ ಹುಕುಂ ಸಾಗುವಳಿದಾರರ ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿ ಕಛೇರಿ ಎದುರು ಜಮಾಯಿಸಿದ ಪ್ರಾಂತ ರೈತ ಸಂಘದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಭೂಮಿ ಸಾಗುವಳಿ ಮಾಡುವವರಿಗೆ ಭೂಮಿ ಹಕ್ಕು ನೀಡಬೇಕು. ಸ್ವಾಮಿನಾಥನ್ ಆಯೋಗದ ಸಲಹೆಯಂತೆ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಕೊಡಬೇಕು. ಗುಳೆ ಹೋಗುವುದನ್ನು ತಪ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಮಾಡಿದವರಿಗೆ ಕೂಲಿ ಪಾವತಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.