ಕಲಬುರಗಿ: ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಹರನೂರ ಗ್ರಾಮದ ಬಸಲಿಂಗಪ್ಪ (28), ಮಹಾಂತಯ್ಯ (60) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಸಲಿಂಗಪ್ಪಗೆ ಗಂಡು ಮಗು ಜನಿಸಿದ್ದು, ಇಂದು ನಾಮಕರಣ ಕಾರ್ಯಕ್ರಮ ಇಟ್ಟುಕೊಂಡಿದ್ದರು.
ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಸಹ ಮಾಡಿಕೊಂಡಿದ್ದರು. ಕಾರ್ಯಕ್ರಮಕ್ಕೆ ಇನ್ನೂ ಕೆಲವು ಸಾಮಗ್ರಿಗಳು ಬೇಕು ಎಂದು ತರಲು ಗ್ರಾಮದಿಂದ ಪಟ್ಟಣಕ್ಕೆ ಬೈಕ್ ಮೇಲೆ ಹೋಗಿ, ಮರಳುವಾಗ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದ ನಂತರ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಮತ್ತು ಗೂಡ್ಸ್ ವಾಹನದ ನಡುವೆ ಡಿಕ್ಕಿ: ಆಳಂದ ತಾಲೂಕಿನ ಕಡಗಂಚಿ ಬಳಿ ಲಾರಿ ಹಾಗೂ ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮೃತರು ಮಹಾರಾಷ್ಟ್ರದ ಉಮರ್ಗಾ ಮೂಲದವರು ಎನ್ನಲಾಗ್ತಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಈ ಕುರಿತು ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಸನ ರಸ್ತೆ ಅಪಘಾತಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ: ಪ್ರಾಥಮಿಕ ತನಿಖೆಯ ಬಗ್ಗೆ ಸಚಿವರ ಮಾಹಿತಿ