ETV Bharat / state

ಕಲಬುರಗಿಯಲ್ಲಿ ಯುವಕರ ಮಧ್ಯೆ ಮಾರಾಮಾರಿ: ಓರ್ವ ಸಾವು, ಮತ್ತೋರ್ವ ಗಂಭೀರ

author img

By

Published : Oct 16, 2022, 10:28 PM IST

ಯುವಕರ ಮಧ್ಯೆ ಮಾರಾಮಾರಿ ನಡೆದು ಒಬ್ಬ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿಯ ಜಿಲ್ಲೆಯಲ್ಲಿ ನಡೆದಿದೆ.

fighting-between-youths-one-died-in-kalburgi
ಯುವಕರ ಮಧ್ಯೆ ಮಾರಾಮಾರಿ : ಓರ್ವ ಸಾವು, ಮತ್ತೋರ್ವ ಗಂಭೀರ

ಕಲಬುರಗಿ : ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಓರ್ವ ಯುವಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಕರಿಂಲಾಲ್‌ (25) ಎಂದು ಗುರುತಿಸಲಾಗಿದೆ.‌ ಗಂಭೀರವಾಗಿ ಗಾಯಗೊಂಡ ಮತ್ತೋರ್ವನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಡಿದ ಅಮಲಿನಲ್ಲಿ ಕರಿಂಲಾಲ್ ಹಾಗೂ ಮತ್ತೋರ್ವ ಯುವಕನ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋಗಿ ಕರಿಂಲಾಲ್​ಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಯುವತಿಗೋಸ್ಕರ ಇಬ್ಬರ ನಡುವೆ ಗಲಾಟೆ ಆರಂಭಗೊಂಡು, ಬಳಿಕ ಇಬ್ಬರ ಕಡೆಯವರು ಆಗಮಿಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಸದ್ಯ ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ: 9 ಮಂದಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.