ಕಲಬುರಗಿ: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಟ ನಡೆಸಿದ ಐವರ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ.
ಈ ಹಿಂದೆಯೇ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಓಡಾಡಿದವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಜನ ಪದೇ-ಪದೆ ನಿಯಮ ಉಲ್ಲಂಘನೆ ಮಾಡುತ್ತಲೇ ಇದ್ದಾರೆ. ಇದೀಗ ನಿಯಮ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಓಡಾಡಿದ ಐವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಹೋಮ್ ಕ್ವಾರಂಟೈನ್ ನಿಂದ 14 ದಿನದ ಮಟ್ಟಿಗೆ ಸರ್ಕಾರಿ ಕ್ವಾರಂಟೈನ್ (ಸಾಂಸ್ಥಿಕ) ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ.
ಚಿತ್ತಾಪುರ ತಾಲೂಕು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾಗಾಪುರ ಬಾಂಬ್ಲಾ ನಾಯಕ್ ತಾಂಡಾದ ಓರ್ವ ವ್ಯಕ್ತಿ, ಲಾಡ್ಲಾಪುರ್ ಗ್ರಾಮದ ಓರ್ವ ವ್ಯಕ್ತಿ, ವಾಡಿ ಪಟ್ಟಣದ ಇಬ್ಬರು ಸೇರಿ ನಾಲ್ಕು ಜನ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಇನ್ನೂ ಮಹಾರಾಷ್ಟ್ರ ದಿಂದ ಬಂದು ಮಾಹಿತಿ ನೀಡದೆ ಸಾರ್ವಜನಿಕ ಪ್ರದೇಶದಲ್ಲಿ ಓಡಾಡಿದ ವಾಡಿ ಪಟ್ಟಣದ ಓರ್ವ ನಿವಾಸಿ ಸೇರಿ ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಇವರನ್ನು ನಾಳೆ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸುವುದಾಗಿ ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ್ ಭಾವಗಿ ತಿಳಿಸಿದ್ದಾರೆ.
ಕಲಬುರಗಿ: ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಐವರ ಮೇಲೆ ಎಫ್‌ಐಆರ್ - F I r on who violate the home quarantine rules
ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಟ ನಡೆಸಿದ ಐವರ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಇವರನ್ನು ನಾಳೆ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸುವದಾಗಿ ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ್ ಭಾವಗಿ ತಿಳಿಸಿದ್ದಾರೆ.