ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾದಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಮೃತಪಟ್ಟವರ ಸಂಖ್ಯೆ 290 ಕ್ಕೆ ಏರಿಕೆಯಾಗಿದೆ.
65 ವರ್ಷದ ಮಹಿಳೆ, 60 ವರ್ಷದ ಮಹಿಳೆ, 74 ವರ್ಷದ ವೃದ್ಧ, 54 ವರ್ಷದ ವ್ಯಕ್ತಿ ಹಾಗೂ 60 ವರ್ಷದ ಮಹಿಳೆ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ.
ಇಂದು 128 ಜನರಿಗೆ ಹೊಸದಾಗಿ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ18,182 ಕ್ಕೆ ಏರಿಕೆಯಾಗಿದೆ.
ಈ ದಿನ ಜಿಲ್ಲೆಯಲ್ಲಿ 64 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಗುಣಮುಖರಾದವರ ಸಂಖ್ಯೆ15,699 ಕ್ಕೆ ಏರಿಕೆಯಾಗಿದೆ.
ಇನ್ನು 2,193 ಆ‌್ಯಕ್ಟಿವ್ ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ.