ಕಲಬುರಗಿ : ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಸೇರಿದಂತೆ ಐವರಿಗೆ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದೆ.
ಸಮಾಜ ಸೇವೆಗಾಗಿ ಮಂಜಮ್ಮ ಜೋಗತಿ ಅವರಿಗೆ, ವೈದ್ಯಕೀಯ ಸೇವೆಗಾಗಿ ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್ ರೆಡ್ಡಿ, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗೆ ಹರಿಹರದ ಶಿವಯೋಗಾಶ್ರಮ ಶರಣಬಸವಲಿಂಗ ಶಿವಯೋಗಿಗಳಿಗೆ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ದಿ. ಬಸವರಾಜಪ್ಪ ಅಪ್ಪ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಲಾಗಿದೆ.
ಕಲಬುರಗಿಯ ಡಾ.ಬಸವರಾಜಪ್ಪ ಅಪ್ಪ ಸಭಾಂಗಣದಲ್ಲಿ ನಡೆದ ಶರಣಬಸವ ವಿಶ್ವವಿದ್ಯಾಲಯದ 3 ನೇ ಮತ್ತು 4 ನೇ ಘಟಿಕೋತ್ಸವ ಸಂದರ್ಭದಲ್ಲಿ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಒಟ್ಟು 2382 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮತ್ತು 337 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ವಿವಿ ಕುಲಪತಿ ಡಾ.ಶರಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾಸಂಸ್ಥೆಯ ದ್ರಾಕ್ಷಾಯಿಣಿ ಅಮ್ಮ, ಬಡವರಾಜ ದೇಶಮುಖ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ: ಟಿ ಎಸ್ ನಾಗಾಭರಣ