ಕಲಬುರಗಿ: ಭೀಮಾ ನದಿಗೆ ಮಹಾರಾಷ್ಟ್ರದಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಜಿಲ್ಲೆಯ ಅಫ್ಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಯಲ್ಲಮ್ಮ ದೇವಸ್ಥಾನ ಮುಳುಗಡೆಯಾಗಿದೆ. ಭೀಮಾ ನದಿ ದಡದಲ್ಲಿರುವ ಯಲ್ಲಮ್ಮ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ. ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ ಹಾಗೂ ವೀರ್ ಜಲಾಶಯದಿಂದ 75 ಸಾವಿರ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡಲಾಗಿದೆ.
ಮೂರು ದಿನಗಳ ಹಿಂದೆ ಮಹಾರಾಷ್ಟ್ರದಿಂದ ಭೀಮಾ ನದಿಗೆ ನೀರು ಬಿಡಲಾಗಿತ್ತು. ಹೀಗಾಗಿ ಭೀಮಾ ನದಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹ ಭೀತಿ ಸೃಷ್ಟಿಯಾಗಿದೆ. ನದಿ ಬಳಿಗೆ ತೆರಳದಂತೆ ನದಿ ಪಾತ್ರದ ಗ್ರಾಮಗಳ ಜನತೆಗೆ ಎಚ್ಚರಿಕೆ ನೀಡಲಾಗಿದೆ.