ಕಲಬುರಗಿ : ಬಡವರಿಗೆ ಸೇರಬೇಕಾದ ಪಡಿತರ ಧಾನ್ಯ ಕಾಳಸಂತೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವುದು ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ಬಳಿಕ ಬೆಳಕಿಗೆ ಬಂದಿದೆ.
ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ಬಡ ಕುಟುಂಬಗಳಿಗೆ ನೀಡಬೇಕಾಗಿದ್ದ ಅಕ್ಕಿಯನ್ನು ನೆರೆರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಪಿಎಂಸಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, 1200 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಘಟನೆಯ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡವರಿಗೆ ನೀಡಬೇಕಾದ ಅಕ್ಕಿ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರೋದು ಯಾರು ಅನ್ನೋದು ತನಿಖೆಯಿಂದಷ್ಟೇ ತಿಳಿಯಬೇಕಿದೆ.