ಕಲಬುರ್ಗಿ : ಜಿಲ್ಲಾಡಳಿತದ ವತಿಯಿಂದ ಕಲಬುರ್ಗಿ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ 350 ಆಹಾರ ಸಾಮಾಗ್ರಿಗಳ ಕಿಟ್ಗಳನ್ನು ವಿತರಿಸಲಾಯಿತು.
10 ಕೆಜಿ ಅಕ್ಕಿ, 2 ಕೆಜಿ ಗೋಧಿ, 1 ಕೆಜಿ ಬೇಳೆ, 1ಲೀಟರ್ ಎಣ್ ಹಾಗೂ ಸೇರಿ ಮುಂತಾದ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್‌ನ ಜಿಲ್ಲಾಧಿಕಾರಿ ಬಿ. ಶರತ್ ವಿತರಿಸಿದರು.
ಈ ವೇಳೆ ಆಹಾರ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪ್ರಿಯಾ ಡೇವಿಡ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ, ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿ ಸಿಂಗ್ ಠಾಕೂರು ಸೇರಿ ಮತ್ತಿತರು ಹಾಜರಿದ್ದರು.