ETV Bharat / state

ಸೇಡಂ ಶಾಸಕರಿಂದ ಅನೈತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ : ಮಾಜಿ ಸಚಿವರ ಆರೋಪ

ಸೇಡಂ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಸೇರಿದಂತೆ ಅನೇಕ ಅನೈತಿಕ ಚಟುವಟಿಕೆಗಳಿಗೆ ಶಾಸಕರು ಮತ್ತು ಅವರ ಸಹೋದರರು ಪ್ರೋತ್ಸಾಹ ನೀಡುತ್ತಿದ್ದಾರೆ. ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ. ಪೊಲೀಸರನ್ನು ಬಳಸಿಕೊಂಡು ಅಮಾಯಕರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.

Former Minister Dr. Shasranprakash patil slams sedam MLA
ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಆರೋಪ
author img

By

Published : Nov 30, 2020, 8:18 AM IST

Updated : Nov 30, 2020, 8:55 AM IST

ಸೇಡಂ: ಸೇಡಂ ಶಾಸಕರು ಅನೈತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ಮೂಲಕ ದುರಾಡಳಿತ ನಡೆಸಿದ್ದಾರೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಆರೋಪ

ಕಾಂಗ್ರೆಸ್​ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಸೇಡಂ ಶಾಸಕರ ದುರಾಡಳಿತ, ಅನೈತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸುತ್ತಿರುವುದನ್ನು ಖಂಡಿಸಿ ಅನೇಕ ಯುವಕರು ಮತ್ತು ಮುಖಂಡರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗುತ್ತಿದ್ದಾರೆ ಎಂದರು. ಸೇಡಂ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಸೇರಿದಂತೆ ಅನೇಕ ಅನೈತಿಕ ಚಟುವಟಿಕೆಗಳಿಗೆ ಶಾಸಕರು ಮತ್ತು ಅವರ ಸಹೋದರರು ಪ್ರೋತ್ಸಾಹ ನೀಡುತ್ತಿದ್ದಾರೆ. ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ. ಪೊಲೀಸರನ್ನು ಬಳಸಿಕೊಂಡು ಅಮಾಯಕರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಗುಡುಗಿದರು.

ಓದಿ:ಇನ್​ಸ್ಟಾಗ್ರಾಂ ಲವ್​​: ಯುವತಿ ನಂಬಿಸಿ 2 ಲಕ್ಷ ರೂ. ಎಗರಿಸಿದ ನಯವಂಚಕ' - ನ್ಯಾಯಕ್ಕಾಗಿ ಯುವತಿ ಅಳಲು

ಈ ವೇಳೆ, ಬ್ಲಾಕ್ ಕಾಂಗ್ರೆಸ್​ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ವಿ.ಎಸ್.ಎಸ್.ಎನ್. ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಮುಖಂಡರಾದ ಸತೀಶರೆಡ್ಡಿ ಪಾಟೀಲ ರಂಜೋಳ, ರಾಜುಗೌಡ ಬೆನಕನಹಳ್ಳಿ, ನಂದಕಿಶೋರರೆಡ್ಡಿ ಪಾಟೀಲ, ರಾಜಶೇಖರ ಪುರಾಣಿಕ, ಸದಾಶಿವರೆಡ್ಡಿ ಉಮಾರೆಡ್ಡಿ, ರುದ್ರು ಪಿಲ್ಲಿ ಇದ್ದರು.

Last Updated : Nov 30, 2020, 8:55 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.