ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ನಡೆದಿದೆ.
![former-sucide-in-kalaburagi-news](https://etvbharatimages.akamaized.net/etvbharat/prod-images/9778810_thu.jpg)
ಮಾದೇವಪ್ಪ ಪೂಜಾರಿ (65) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಚಟುವಟಿಕೆಗಾಗಿ ಕೆಜಿಬಿ ಬ್ಯಾಂಕಿನಲ್ಲಿ 3 ಲಕ್ಷ ರೂ. ಹಾಗೂ ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಮಾಡಿದ ಸಾಲ ಮರು ಪಾವತಿ ಮಾಡಲಾಗದೆ ಮನ ನೊಂದಿದ್ದು, ಜಮೀನಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ದೂರು ದಾಖಲಿಸಿದ್ದಾರೆ.
ಮೃತ ರೈತನಿಗೆ ಪತ್ನಿ ಹಾಗೂ ನಾಲ್ವರು ಹೆಣ್ಣು ಮಕ್ಕಳಿದ್ದು, ಕುಟುಂಬ ನಿರ್ವಹಣೆಗೆ ಆರ್ಥಿಕ ಸಮಸ್ಯೆ ಎದುರಾಗಿದೆ. ಸರ್ಕಾರ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮದ ಮುಖಂಡರು ಆಗ್ರಹಿಸಿದ್ದಾರೆ. ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 27 ಗ್ರಾಮ ಪಂಚಾಯತ್ಗಳ ಚುನಾವಣೆ ಕೈ ಬಿಟ್ಟ ರಾಜ್ಯ ಚುನಾವಣಾ ಆಯೋಗ!