ETV Bharat / state

ಭೀಮಾ ತೀರದಲ್ಲಿ ಮುಗಿಯದ ರಕ್ತ ಚರಿತೆ: ಜಿ.ಪಂ ಮಾಜಿ ಸದಸ್ಯನ ಸಹೋದರನ ಬರ್ಬರ ಹತ್ಯೆ

author img

By

Published : Jun 8, 2021, 7:26 PM IST

ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಬಳಿ ಹನುಮಂತನ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

former-zp-member-brother-murder-in-kalaburagi
ಹಣಮಂತ ಕೂಡಲಗಿ

ಕಲಬುರಗಿ: ಮತ್ತೆ ಭೀಮಾತೀರದಲ್ಲಿ ರಕ್ತಪಾತ ನಡೆದಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹನುಮಂತ ಕೂಡಲಗಿ (40) ಮೃತ ವ್ಯಕ್ತಿ. ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಬಳಿ ಹನುಮಂತನ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಮೃತ ಹನುಮಂತ ಹಾಗೂ ಆತನ ಅಣ್ಣ ಶಾಂತಪ್ಪ ಜೇವರ್ಗಿ ತಾಲೂಕಿನ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಭಾವಿಕಟ್ಟಿ ಎಂಬುವರ ಕೊಲೆ ಪ್ರಕರಣದಲ್ಲಿ 2019ರ ನವೆಂಬರ್‌ನಲ್ಲಿ ಜೈಲು ಸೇರಿದ್ದರು. ಕೆಲ ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಸ್ಥಳಕ್ಕೆ ಡಿವೈಎಸ್ಪಿ ಸೇರಿ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.