ಕಲಬುರಗಿ: ಕೊರೊನ ಸೋಂಕಿನಿಂದ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ 60 ವರ್ಷದ ವೃದ್ಧ P-51830 ಜುಲೈ 12ರಂದು ಆಸ್ಪತ್ರೆಗೆ ದಾಖಲಾಗಿ ಜುಲೈ 15 ರಂದು ಸಾವನ್ನಪ್ಪಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಮಧುಮೇಹದದಿಂದ ಬಳಲುತ್ತಿದ್ದ ಕಲಬುರಗಿಯ ಎಸ್.ಬಿ ಕಾಲೇಜ್ ರಾಮನಗರದ ನಿವಾಸಿ 47 ವರ್ಷದ ಪುರುಷ P-57029 ಜುಲೈ 9ರಂದು ಆಸ್ಪತ್ರೆಗೆ ದಾಖಲಾಗಿ ಜುಲೈ 10ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ 60 ವರ್ಷದ ವೃದ್ಧ P-57408 ಜುಲೈ 11ರಂದು ಆಸ್ಪತ್ರೆಗೆ ದಾಖಲಾಗಿ ಜುಲೈ 18ರಂದು ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟ ಸಮಸ್ಯೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ನಗರದ ಮದೀನಾ ಕಾಲೋನಿ ನಿವಾಸಿ, 65 ವರ್ಷದ ವೃದ್ಧ P-57484 ಜುಲೈ 12ರಂದು ಆಸ್ಪತ್ರೆಗೆ ದಾಖಲಾಗಿ ಅಂದೆ ನಿಧನರಾಗಿದ್ದಾರೆ.
ಇಂದು ಮತ್ತೆ ಹೊಸದಾಗಿ 183 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 145 ಜನರು ರೋಗದಿಂದ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3712, ಗುಣಮುಖರಾದವರ ಸಂಖ್ಯೆ 2066, ಮೃತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. 1558 ಸಕ್ರಿಯ ಪ್ರಕರಣಗಳಿದ್ದು, ಐಸೋಲೇಷನ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.