ETV Bharat / state

ಪೊಲೀಸರ ಮೇಲೆ ಗಾಂಜಾ ದಂಧೆಕೋರರ ಅಟ್ಟಹಾಸ: ಕಲಬುರಗಿ ಸರ್ಕಲ್ ಇನ್ಸ್​ಪೆಕ್ಟರ್​​ ಸ್ಥಿತಿ ಚಿಂತಾಜನಕ

ಪೊಲೀಸರ ಮೇಲೆ ಗಾಂಜಾ ದಂಧೆಕೋರರು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಕಮಲಾಪುರ ಸರ್ಕಲ್ ಇನ್ಸ್​ಪೆಕ್ಟರ್ ಶ್ರೀಮಂತ ಇಲ್ಲಾಳ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Kamalapur CPI
ಕಮಲಾಪುರ ಸರ್ಕಲ್ ಇನ್ಸ್​ಪೆಕ್ಟರ್ ಶ್ರೀಮಂತ ಇಲ್ಲಾಳ
author img

By

Published : Sep 24, 2022, 11:11 AM IST

ಕಲಬುರಗಿ: ಪೊಲೀಸರ ಮೇಲೆಯೇ ಮಾರಣಾಂತಿಕ ದಾಳಿ ಮಾಡುವ ಮೂಲಕ ಗಾಂಜಾ ದಂಧೆಕೋರರು ಅಟ್ಟಹಾಸ ಮೆರೆದಿರುವ ಪ್ರಕರಣ ಮಹಾರಾಷ್ಟ್ರ- ಕರ್ನಾಟಕ ಗಡಿಭಾಗದ ಹೊನ್ನಾಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಕಮಲಾಪುರ ಸರ್ಕಲ್ ಇನ್ಸ್​ಪೆಕ್ಟರ್ ಶ್ರೀಮಂತ ಇಲ್ಲಾಳ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಹಿಸಲಾಗುತ್ತಿದೆ.

ಶ್ರೀಮಂತ ಇಲ್ಲಾಳ‌ ಅವರ ಹೊಟ್ಟೆ, ತಲೆ ಹಾಗೂ ದೇಹದ ಹಲವಡೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಬಸವಕಲ್ಯಾಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ವಿನ ಚಿಕಿತ್ಸೆಗಾಗಿ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಯೆ ನೀಡಲಾಗುತ್ತಿದೆ.

Kamalapur CPI
ಕಮಲಾಪುರ ಸರ್ಕಲ್ ಇನ್ಸ್​ಪೆಕ್ಟರ್ ಶ್ರೀಮಂತ ಇಲ್ಲಾಳ

ಪ್ರಕರಣದ ವಿವರ: ಕಳೆದ ಎರಡು ದಿನಗಳ ಹಿಂದೆ ಕಮಲಾಪುರ ತಾಲೂಕಿನ ದಸ್ತಾಪುರ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕಲಬುರಗಿಯ ನವೀನ ಹಾಗೂ ಬಸವಕಲ್ಯಾಣ ತಾಲೂಕು ಭೋಸಗಾದ ಸಂತೋಷ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಇವರು ನೀಡಿದ ಮಾಹಿತಿ ಆಧಾರದ ಮೇಲೆ ಗಾಂಜಾ ಬೆಳೆಯ ಮೂಲಸ್ಥಾನ ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಹೊನ್ನಾಳಿ ಜಮೀನೊಂದರ ಮೇಲೆ ಕಮಲಾಪುರ ಸಿಪಿಐ ಶ್ರೀಮಂತ ಇಲ್ಲಾಳ ನೇತೃತ್ವದ 10 ಜನರ ತಂಡ ದಾಳಿ ನಡೆಸಿತ್ತು.

Ganja dealers attack on police
ಇನ್ಸ್​ಪೆಕ್ಟರ್ ಶ್ರೀಮಂತ ಇಲ್ಲಾಳ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು..

ಈ ವೇಳೆ ಕಟ್ಟಿಗೆ, ಕಲ್ಲು ಸಮೇತ ದಿಢೀರನೇ ಪ್ರತ್ಯಕ್ಷವಾದ ಸುಮಾರು 40 ಜನ ದುಷ್ಕರ್ಮಿಗಳ ತಂಡ ಕೈಗೆ ಸಿಕ್ಕ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಸಿಪಿಐ ಶ್ರೀಮಂತ ಇಲ್ಲಾಳ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾಗಾಂವ್​ ಪಿಎಸ್ಐ ಆಶಾ ರಾಠೋಡ ಸೇರಿದಂತೆ ಇತರೆ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ನಕಲಿ ಮದ್ಯದ ದಾಸ್ತಾನು ವಿರುದ್ಧ ಕಾರ್ಯಾಚರಣೆ: ಅಬಕಾರಿ ಪೊಲೀಸರ ಮೇಲೆ ಭಾರಿ ದಾಳಿ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.